ಪುತ್ತೂರು : ನಗರ ಪೊಲೀಸ್ ಠಾಣೆಯ ಎಸ್.ಐ ಆಂಜನೇಯ ರೆಡ್ಡಿಯವರ ಮುಂದಾಳತ್ವದಲ್ಲಿ ಕೊಂಬೆಟ್ಟು ಪ.ಪೂ ಕಾಲೇಜು ಪ್ರೌಢಶಾಲಾ ವಿಭಾಗದ ಸಹಯೋಗದಲ್ಲಿ, ಪುತ್ತೂರು ತಾಲೂಕಿನ ಸರಕಾರಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ 10ನೇ ತರಗತಿಯ ವಿದ್ಯಾರ್ಥಿಗಳಿಗೆ ರಸಪ್ರಶ್ನೆಯನ್ನು ಆಯೋಜಿಸಲಾಗಿದೆ.
ಈ ಸ್ಪರ್ಧೆಗೆ ಶಾಲೆಗಳಿಂದ ಇಬ್ಬರು ವಿದ್ಯಾರ್ಥಿಗಳು ಭಾಗವಹಿಸಲು ಅವಕಾಶವಿದೆ.
ಆ.21ಕ್ಕೆ ಕೊಂಬೆಟ್ಟು ಸರಕಾರಿ ಪ್ರೌಢಶಾಲೆಯಲ್ಲಿ ಸ್ಪರ್ಧೆ ನಡೆಯಲಿದೆ. ಸ್ಪರ್ಧೆಯಲ್ಲಿ ನಗದು ಬಹುಮಾನ ನೀಡಲಾಗುವುದು ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.


























