ಹಾಸನ : ಜಿಲ್ಲೆಯ ಸಕಲೇಶಪುರ ತಾಲೂಕಿನ ಆಚಂಗಿ-ದೊಡ್ಡನಾಗರ ಬಳಿ ರೈಲ್ವೆ ಹಳಿ ಮೇಲೆ ಮತ್ತೆ ಭೂಕುಸಿತವಾಗಿದೆ. ಹೀಗಾಗಿ ಬೆಂಗಳೂರು-ಮಂಗಳೂರು ನಡುವಿನ ರೈಲುಗಳ ಸಂಚಾರ ಸ್ಥಗಿತವಾಗಿದೆ. ಆ ಮೂಲಕ ಪ್ರಯಾಣಿಕರಿಗೆ ಮತ್ತೊಮ್ಮೆ ಶಾಕ್ ಎದುರಾಗಿದೆ.
ವಾರದ ಹಿಂದೆ ಇದೆ ಜಾಗದಲ್ಲಿ ರೈಲ್ವೆ ಹಳಿ ಮೇಲೆ ಮಣ್ಣು ಕುಸಿದಿತ್ತು. ಬಳಿಕ ಮಣ್ಣು ತೆರವು ಮಾಡಿ ರೈಲು ಸಂಚಾರ ಆರಂಭವಾಗಿದ್ದು, ಬಳಿಕ ಇದೀಗ ಮತ್ತೆ ಮಣ್ಣು ಕುಸಿತವಾಗಿದೆ.
ಭೂಕುಸಿತದಿಂದಾಗಿ ಯಶವಂತಪುರ-ಕಾರವಾರ ಎಕ್ಸ್‌ಪ್ರೆಸ್ ರೈಲು ಬಾಳ್ಳುಪೇಟೆ ಬಳಿ ನಿಂತುಕೊಂಡಿದೆ. ರೈಲು ಸಂಚಾರ ಸ್ಥಗಿತವಾಗಿದ್ದರಿಂದ ನೂರಾರು ಪ್ರಯಾಣಿಕರು ಪರದಾಡಿದ್ದಾರೆ. ಘಟನಾ ಸ್ಥಳಕ್ಕೆ ರೈಲ್ವೆ ಇಲಾಖೆ ಸಿಬ್ಬಂದಿ ದೌಡಾಯಿಸಿದ್ದು ಪರಿಶೀಲನೆ ಮಾಡಿದ್ದಾರೆ.
ಸಾಲು ಸಾಲು ಗುಡ್ಡ ಕುಸಿತದ ಪ್ರಕರಣಗಳು ಸಂಭವಿಸುತ್ತಿವೆ. ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಬಿಟ್ಟು ಬಿಟ್ಟು ಬರುತ್ತಿರುವ ಮಳೆಯಿಂದಾಗಿ ಪರ್ವತಗಳ ಸಾಲಿನಲ್ಲಿ ಭೂ ಕುಸಿತ ಶುರುವಾಗಿದೆ.



























