ಬೆಳ್ತಂಗಡಿ : ತಾಲೂಕು ಆಡಳಿತದಿಂದ ಆಡಳಿತ ಸೌಧದ ಮುಂಭಾಗದಲ್ಲಿ ನಡೆದ ಸ್ವಾತಂತ್ರೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ, ಈ ದೇಶಕ್ಕೆ ಕೇವಲ ಶಾಂತಿಯಿಂದ ಕೇವಲ ಚರಕ ತಿರುಗಿಸಿದರಿಂದ ಈ ದೇಶಕ್ಕೆ ಸ್ವಾತಂತ್ರ್ಯ ಬಂದಿಲ್ಲ ಎಂದು ಸರ್ಕಾರಿ ಅಧಿಕೃತ ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧೀಜಿಯ ಕುರಿತು ಅವಮಾನದ ರೀತಿಯಲ್ಲಿ ಭಾಷಣ ಮಾಡಿರುವುದು ಸಮಾಜದಲ್ಲಿ ಹಿಂದೂ-ಮುಸ್ಲಿಂ ಸಮುದಾಯದವರಲ್ಲಿ ಕಂದಕವನ್ನು ಸೃಷ್ಟಿ ಮಾಡಿ ಸಮಾಜದ ನೆಮ್ಮದಿ ಮತ್ತು ಶಾಂತಿಯನ್ನು ಕದಡುವಂತೆ ಪ್ರೇರೇಪಿಸುತ್ತಿದ್ದಾರೆ ಎಂದು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಠಾಣೆಗೆ ದೂರು ನೀಡಲಾಯಿತು.

ಹರೀಶ್ ಪೂಂಜ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಬೆಳ್ತಂಗಡಿ ಪೊಲೀಸ್ ರಾಣೆಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೆ. ಎಮ್ ನಾಗೇಶ್ ಕುಮಾರ್ ಗೌಡ ಮತ್ತು ಸಿಪಿಐಎಮ್ ಮುಖಂಡ ಬಿ.ಎಂ ಭಾರತೀಯ ದೂರು ನೀಡಿದ್ದಾರೆ.



























