ಬಂಟ್ವಾಳ : ಅಕ್ರಮವಾಗಿ ಮಟ್ಕಾ ಚೀಟಿ ವ್ಯವಹಾರ ನಡೆಸುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿದ ಪೊಲೀಸರು ಮೂವರನ್ನು ವಶಕ್ಕೆ ಪಡೆದ ಘಟನೆ ಬಂಟ್ವಾಳ ತಾಲೂಕು ಬಿ. ಮೂಡ ಗ್ರಾಮದ ಪದ್ಮಕಾಂಪ್ಲೆಕ್ಸ್ ಕಟ್ಟಡದ ತಳಭಾಗದಲ್ಲಿ ನಡೆದಿದೆ.
ಮಂಜೇಶ್ವರ ನಿವಾಸಿ ಸಜೀತ್, ಉಚ್ಚಿಲ ನಿವಾಸಿ ವೀಶಾಲ್ ಸಿ., ಮಂಜೇಶ್ವರ ನಿವಾಸಿ ಸುನೀಲ್ ಕುಮಾರ್ ಬಂಧಿತರು.
ಬಂಟ್ವಾಳ ಉಪವಿಭಾಗದ ಡಿವೈಎಸ್ಪಿ ವಿಜಯ್ ಪ್ರಸಾದ್ ಅವರು ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿದ ವೇಳೆ ಬಂಟ್ವಾಳ ತಾಲೂಕು ಬಿ. ಮೂಡ ಗ್ರಾಮದ ಪದ್ಮಕಾಂಪ್ಲೆಕ್ಸ್ ಕಟ್ಟಡದ ತಳಭಾಗದಲ್ಲಿ ಅಕ್ರಮವಾಗಿ ಮಟ್ಕಾ ಚೀಟಿ ವ್ಯವಹಾರ ನಡೆಸುತ್ತಿರುವುದು ಕಂಡು ಬಂದಿದ್ದು, ಸಂಬಂಧಿಸಿದಂತೆ ಮೂವರನ್ನು ವಶಕ್ಕೆ ಪಡೆದಿದ್ದು, ಕೃತ್ಯಕ್ಕೆ ಬಳಸಿದ ವಿವಿಧ ಮುಖ ಬೆಲೆಯ ನೋಟುಗಳನ್ನು, ಕ್ಯಾಲ್ಕುಲೇಟರ್, ಪೆನ್ನುಗಳು, ಪುಸ್ತಕಗಳು, ಮೊಬೈಲ್ ಪೋನ್ ಗಳನ್ನು ಸ್ವಾಧೀನ ಪಡಿಸಿಕೊಳ್ಳಲಾಗಿದ್ದು, ವಶಪಡಿಸಿಕೊಂಡ ಸೊತ್ತುಗಳ ಅಂದಾಜು ಮೌಲ್ಯ 70,505/-ರೂಗಳಾಗಿರುತ್ತದೆ.
ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಅ.ಕ್ರ: 139/2024 ಕಲಂ: 78(3) KP ಆಕ್ಟ್ ರಂತೆ ಪ್ರಕರಣ ದಾಖಲಾಗಿರುತ್ತದೆ.



























