ಪುತ್ತೂರು : ಸ್ಕೂಟರ್ ಸವಾರನೋರ್ವ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆದು ಪರಾರಿಯಾದ ಘಟನೆ ಪುತ್ತೂರು ತಾಲೂಕು ಉಪ್ಪಿನಂಗಡಿ ಗ್ರಾಮದ ಎಸ್.ಬಿ.ಐ ಬ್ಯಾಂಕ್ ಬಳಿ ನಡೆದಿದೆ.
ಈ ಬಗ್ಗೆ ಮಹಿಳೆ ನೀಡಿದ ದೂರಿನ ಮೇರೆಗೆ ಪುತ್ತೂರು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆ.16 ರಂದು ಬೆಳಿಗ್ಗೆ ಅಪರಿಚಿತ ಸ್ಕೂಟರ್ ಸವಾರನು ಪುತ್ತೂರು ತಾಲೂಕು ಉಪ್ಪಿನಂಗಡಿ ಗ್ರಾಮದ ಎಸ್.ಬಿ.ಐ ಬ್ಯಾಂಕ್ ಬಳಿ ಅಜಾಗರೂಕತೆ ಮತ್ತು ನಿರ್ಲಕ್ಷ್ಯತನದಿಂದ ಚಲಾಯಿಸಿ, ಡಾಮಾರು ರಸ್ತೆ ಬದಿಯ ಮಣ್ಣು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಡಿಕ್ಕಿ ಪಡಿಸಿದ್ದು, ಅಪಘಾತದ ಪರಿಣಾಮ ಮಹಿಳೆ ರಸ್ತೆಗೆ ಬಿದ್ದು ಸಣ್ಣ ಪ್ರಮಾಣದ ಗಾಯಗಳಾಗಿದ್ದು, ಅಪಘಾತದ ಬಳಿಕ ಸವಾರ ಗಾಯಾಳುವನ್ನು ಚಿಕಿತ್ಸೆ ಬಗ್ಗೆ ಆಸ್ಪತ್ರೆಗೆ ದಾಖಲಿಸದೇ, ಪೊಲೀಸ್ ಠಾಣೆಗೆ ಮಾಹಿತಿ ನೀಡದೇ ಪರಾರಿಯಾಗಿರುತ್ತಾನೆ ಎಂದು ದೂರಿನಲ್ಲಿ ತಿಳಿಸಿರುತ್ತಾರೆ.
ಈ ಬಗ್ಗೆ ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ: 91/2024 ಕಲಂ: 281, ಬಿಎನ್ಎಸ್ & 134(ಎ&ಬಿ), ಐಎಂವಿ ಕಾಯ್ದೆಯಡಿ ಪ್ರಕರಣ ದಾಖಲಾಗಿರುತ್ತದೆ.


























