ವಿಟ್ಲ: ಬೈಕ್ ಹಾಗೂ ಸ್ಕೂಟಿ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ಕನ್ಯಾನ ಸಂಕದ ಬಳಿ ನಡೆದ ಬಗ್ಗೆ ವರದಿಯಾಗಿದೆ.
ಕನ್ಯಾನ ದಿಲ್ ದಾರ್ ಹೋಟೇಲ್ ಮಾಲಕರಾದ ಇಬ್ರಾಹಿಂ ರವರು ಕನ್ಯಾನ ಪೇಟೆಗೆ ತೆರಳುತ್ತಿದ್ದ ಸಂದರ್ಭ ಎದುರಿನಿಂದ ಬಂದ ಸ್ಕೂಟಿ ಮಧ್ಯೆ ಈ ಅಪಘಾತ ಸಂಭವಿಸಿದೆ. ಘಟನೆಯಿಂದಾಗಿ ಬೈಕ್ ಸವಾರ ಇಬ್ರಾಹಿಂರವರು ಗಂಭೀರ ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.