ಮಂಗಳೂರು : ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಸೋಮವಾರ (ಆ.19) ಮಂಗಳೂರಿನಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆ ಹಿಂಸಾಚಾರಕ್ಕೆ ತಿರುಗಿದೆ.
ಕಾಂಗ್ರೆಸ್ ಪ್ರತಿಭಟನೆ ವೇಳೆ ಖಾಸಗಿ ಬಸ್ ಗೆ ಕಲ್ಲು ತೂರಾಟ ನಡೆದಿದೆ. ಮಂಗಳೂರಿನ ಲಾಲ್ ಭಾಗ್ ಜಂಕ್ಷನ್ ಬಳಿ ಘಟನೆ ನಡೆದಿದೆ.
ಪಾದಯಾತ್ರೆ ಬಳಿಕ ಸಭೆ ಮುಗಿಯುತ್ತಲೇ ರಸ್ತೆಗಿಳಿದ ಕಾರ್ಯಕರ್ತರು ಅಲ್ಲೇ ಸಂಚರಿಸುತ್ತಿದ್ದ ಖಾಸಗಿ ಸಿಟಿ ಬಸ್ ಗೆ ಕಲ್ಲು ಎಸೆದಿದ್ದಾರೆ. ಪರಿಣಾಮ ಬಸ್ ನ ಎದುರಿನ ಗಾಜು ಸಂಪೂರ್ಣ ಪುಡಿಯಾಗಿದೆ.