ಚಿಕ್ಕಮಗಳೂರು : ಮಹಿಳೆಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮೂಡಿಗೆರೆಯ ಚಂದುವಳ್ಳಿ ಗ್ರಾಮದಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾದ ಮಹಿಳೆಯನ್ನು ಸುಭಿಕ್ಷಾ (25) ಎಂದು ಗುರುತಿಸಲಾಗಿದೆ.
ಕಳೆದ 4 ವರ್ಷಗಳ ಹಿಂದೆ ಚಂದುವಳ್ಳಿಯ ಪ್ರವೀಣ್ ಎಂಬವನ ಜೊತೆ ಸುಭಿಕ್ಷಾಳನ್ನು ಮದುವೆ ಮಾಡಿಕೊಡಲಾಗಿತ್ತು. ದಂಪತಿಗೆ ಎರಡೂವರೆ ವರ್ಷದ ಒಂದು ಗುಂಡು ಮಗು ಸಹ ಇದೆ. ಮಹಿಳೆಯ ಆತ್ಮಹತ್ಯೆಗೆ ವರದಕ್ಷಿಣೆ ಕಿರುಕುಳವೇ ಕಾರಣ ಎಂದು ಮೃತಳ ಕುಟುಂಬಸ್ಥರು ಆರೋಪಿಸಿದ್ದಾರೆ.
ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.