ಮಂಗಳೂರು : ವಿದ್ಯಾರ್ಥಿಗಳನ್ನು ಅಪಹರಿಸಿ ಅಮಾನುಷವಾಗಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಗರದ ಮೂವರು ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ.
ಅಫ್ನಾನ್, ದಿಯಾನ್ ಮತ್ತು ಸಲ್ಮಾನ್ ಬಂಧಿತ ವಿದ್ಯಾರ್ಥಿಗಳು. ಇವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.
ಘಟನೆಗೆ ಸಂಬಂಧಿಸಿದಂತೆ ಇನ್ನು 4ರಿಂದ 5 ವಿದ್ಯಾರ್ಥಿಗಳ ಬಂಧನ ಬಾಕಿ ಇದೆ ಎಂದು ತಿಳಿದುಬಂದಿದೆ.
ಫುಟ್ಬಾಲ್ ಪಂದ್ಯಾಟದ ಬಳಿಕ ಉಂಟಾದ ಗಲಾಟೆಯ ಹಿನ್ನೆಲೆಯಲ್ಲಿ ಕಾಲೇಜು ವಿದ್ಯಾರ್ಥಿಗಳ ತಂಡವೊಂದು ಮೂವರು ವಿದ್ಯಾರ್ಥಿ ಗಳನ್ನು ಅಪಹರಿಸಿ ವಿವಸ್ತ್ರಗೊಳಿಸಿ ಅಮಾನುಷವಾಗಿ ಹಲ್ಲೆಗೈದು ಅದರ ವೀಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿತ್ತು.



























