ಬೆಳ್ತಂಗಡಿ : ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಚೆಸ್ ಪಂದ್ಯಾಟದಲ್ಲಿ ಭಾಗವಹಿಸಿದ್ದ ಪೆರ್ಲಂಪಾಡಿ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ ಸಾಕ್ಷಿ ಕೆ.ಆರ್ ಹಾಸನದಲ್ಲಿ ನಡೆಯುವ ರಾಜ್ಯ ಮಟ್ಟದ ಚೆಸ್ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.

ಇವರು ಕೋಡಿಮಜಲು ರವಿಚಂದ್ರ ಕೆ ಮತ್ತು ದಿವ್ಯ ದಂಪತಿಯ ಪುತ್ರಿ. ಇವರಿಗೆ ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ರಾಜೀವಿ ಬಿ.ಕೆ ಮಾರ್ಗದರ್ಶನ ನೀಡಿರುತ್ತಾರೆ.



























