ಪುತ್ತೂರು : ಸರಕಾರಿ ಕಾಲೇಜಿನ ವಿದ್ಯಾರ್ಥಿನಿ ನೀಡಿದ ನಕಲಿ ಚೂರಿ ಇರಿತ ಪ್ರಕರಣವನ್ನು ಖಂಡಿಸಿ ಪುತ್ತೂರಿನ ಕಾಲೇಜು ವಿದ್ಯಾರ್ಥಿಗಳ ಸಭೆ ನಡೆಯಿತು.
ನಕಲಿ ದೂರು ನೀಡಿ ವಿದ್ಯಾರ್ಥಿಯ ಮಾನಹಾನಿ ಮಾಡಿದ ವಿದ್ಯಾರ್ಥಿನಿಯನ್ನು ಕೂಡಲೇ ಕಾಲೇಜಿನಿಂದ ವಜಾ ಮಾಡಬೇಕು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ವಿದ್ಯಾರ್ಥಿಯ ಭಾವಚಿತ್ರ ಹಾಕಿ ಬೆದರಿಕೆಯೊಡ್ಡುತ್ತಿರುವವರ ಮೇಲೆ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದರು.
ಸಭೆಯಲ್ಲಿ ಹಲವು ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.



























