ರಾಮನಗರ : ವಕೀಲೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಾಗಡಿ ಪಟ್ಟಣದ ತಿರುಮಲೆ ಶ್ರೀರಂಗ ಬಡಾವಣೆಯಲ್ಲಿ ನಡೆದಿದೆ.
ವಾಸುಕಿ (25) ಆತ್ಮಹತ್ಯೆ ಮಾಡಿಕೊಂಡ ವಕೀಲೆ.
ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ವಕೀಲೆ ವಾಸುಕಿ, ಗುರುವಾರ (ಆ.22) ಸಂಜೆ ಮಾಗಡಿಯ ನಿವಾಸದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮರಣೋತ್ತರ ಪರೀಕ್ಷೆಗಾಗಿ ಮಾಗಡಿ ಸಾರ್ವಜನಿಕ ಆಸ್ಪತ್ರೆಗೆ ಮೃತದೇಹ ರವಾನೆ ಮಾಡಲಾಗಿದೆ. ಈ ಸಂಬಂಧ ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



























