ಪುತ್ತೂರು : ಅಂಗಡಿಯೊಂದಕ್ಕೆ ಬೆಂಕಿ ಬಿದ್ದ ಘಟನೆ ಆರ್ಯಾಪು ಗ್ರಾಮದ ದೊಡ್ಡಡ್ಕ ಎಂಬಲ್ಲಿ ನಡೆದಿದೆ.

ಸಂಕಪ್ಪ ಪೂಜಾರಿ ಎಂಬವರಿಗೆ ಸೇರಿದ ಅಂಗಡಿ ಇದಾಗಿದ್ದು, ಅಪಾರ ನಷ್ಟ ಸಂಭವಿಸಿದೆ.
ಸ್ಥಳಕ್ಕೆ ಸಂಪ್ಯ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ಆಕಸ್ಮಿಕವಾಗಿ ಬೆಂಕಿ ಬಿದ್ದಿದ್ದೋ, ಯಾರಾದರೂ ಬೆಂಕಿ ಕೊಟ್ಟಿದ್ದೋ ಎಂಬ ಮಾಹಿತಿ ತನಿಖೆಯ ನಂತರ ತಿಳಿಯಬೇಕಿದೆ.

ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ, ಗ್ರಾಮ ಪಂಚಾಯತ್ ಸದಸ್ಯ ಸುಬ್ರಹ್ಮಣ್ಯ ಬಲ್ಯಾಯ, ಗ್ರಾಮ ಪಂಚಾಯತ್ ಸದಸ್ಯ ಸುಬ್ರಹ್ಮಣ್ಯ, ರಾಮ್ ಪ್ರಸಾದ್, ಉಮೇಶ್ ಕೋಡಿಬೈಲ್ ಘಟನಾ ಸ್ಥಳಕ್ಕೆ ಭೇಟಿ ನೀಡಿದರು.


























