ಸವಣೂರು : ಬಸ್ ನಿಲ್ಲಿಸಲಿಲ್ಲವೆಂದು ಗುತ್ತಿಗೆ ಆಧಾರದಲ್ಲಿ ನೇಮಕವಾದ ಬಸ್ ಚಾಲಕನಿಗೆ ಕೆ.ಎಸ್.ಆರ್.ಟಿ.ಸಿ ಸಿಬ್ಬಂದಿ ಹಲ್ಲೆ ನಡೆಸಿದ ಘಟನೆ ಸವಣೂರಿನಲ್ಲಿ ನಡೆದಿದೆ.
ಸವಣೂರು ವಿದ್ಯಾರಶ್ಮಿ ವಿದ್ಯಾಸಂಸ್ಥೆಯ ಬಸ್ ನಿಲ್ದಾಣದಲ್ಲಿ ನಿಂತಿದ್ದ ಕೆ.ಎಸ್.ಆರ್.ಟಿ.ಸಿ ಸಿಬ್ಬಂದಿ ನಾರಾಯಣ ಎಂಬವರಿಗೆ ಬಸ್ ನಿಲ್ದಾಣ ಸಮೀಪ ಬಸ್ ನಿಲ್ಲಿಸಲಿಲ್ಲ ಎಂದು ಆರೋಪಿಸಿ ಚಾಲಕ ಭರತ್ ಎಂಬವರಿಗೆ ಹಲ್ಲೆ ನಡೆಸಲಾಗಿದೆಂದು ಆರೋಪಿಸಿ ಬಸ್ ಚಾಲಕ ಬೆಳ್ಳಾರೆ ಠಾಣೆಗೆ ದೂರು ನೀಡಿದ್ದಾರೆ.
ಬಸ್ ಕೆಲವು ಮೀಟರ್ ದೂರದಲ್ಲಿ ನಿಲ್ಲಿಸಿದಾಗ ಬಸ್ ಗೆ ಹತ್ತಿದ ಸಿಬ್ಬಂದಿ ನಾರಾಯಣ ಅವರು ಚಾಲಕನಿಗೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಬಸ್ ನಲ್ಲಿದ್ದ ಸಹಪ್ರಯಾಣಿಕರು ಘಟನೆಯ ವೀಡಿಯೋ ಚಿತ್ರೀಕರಣ ಮಾಡಿದ್ದು, ವೀಡಿಯೋ ವೈರಲ್ ಆಗಿದೆ.
ಭರತ್ ಒಂದು ವರ್ಷದ ಹಿಂದೆ ಗುತ್ತಿಗೆ ಆಧಾರದಲ್ಲಿ ಉದ್ಯೋಗ ಪಡೆದಿದ್ದರು. ಹಲ್ಲೆಗೊಳಗಾದ ಚಾಲಕ ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

























