ಪುತ್ತೂರು : ವಾಹನ ತಪಾಸಣೆ ವಿಚಾರಕ್ಕೆ ಸಂಬಂಧಿಸಿದಂತೆ ಹೈವೇ ಪೆಟ್ರೋಲಿಂಗ್ ವಾಹನದ ಸಿಬ್ಬಂದಿಗಳು ಹಾಗೂ ಸಾರ್ವಜನಿಕರ ನಡುವೆ ಮಾತಿನ ಚಕಮಕಿ ನಡೆದ ಘಟನೆ ಕಬಕ ಜಂಕ್ಷನ್ ನಲ್ಲಿ ನಡೆದ ಬಗ್ಗೆ ವರದಿಯಾಗಿದೆ.
ನಿನ್ನೆ ಮಧ್ಯಾಹ್ನದ ವೇಳೆಗೆ ತಮ್ಮ ವಾಹನದಲ್ಲಿ ಬಂದ ಪೊಲೀಸ್ ಸಿಬ್ಬಂದಿಗಳು ಕಬಕ – ಮಂಗಳೂರು ರಸ್ತೆಯಲ್ಲಿರುವ ಕಬಕ ಹೈಸ್ಕೂಲ್ ರಸ್ತೆಯ ಮುಂಭಾಗದಲ್ಲಿ ವಾಹನವನ್ನು ನಿಲ್ಲಿಸಿ ಕಬಕ – ವಿಟ್ಲ ರಸ್ತೆಯಲ್ಲಿ ವಾಹನ ತಪಾಸಣೆ ಆರಂಭಿಸಿದ್ದರು.
ಈ ವೇಳೆ ವಾಹನ ಸವಾರರು, ಸಾರ್ವಜನಿಕರು ಹಾಗೂ ಪೊಲೀಸ್ ಸಿಬ್ಬಂದಿ ಮಧ್ಯೆ ಮಾತಿನ ಚಕಮಕಿ ನಡೆದಿದ್ದು, ಕೆಲ ಸಮಯ ಗೊಂದಲ ವಾತಾವರಣ ನಿರ್ಮಾಣವಾಗಿದ್ದು, ಬಳಿಕ ಪರಿಸ್ಥಿತಿ ಹತೋಟಿಗೆ ಬಂತು ಎಂದು ತಿಳಿದು ಬಂದಿದೆ.

























