ಪುತ್ತೂರು : ವಿಶ್ವ ಹಿಂದೂ ಪರಿಷದ್ ಮತ್ತು ಮೊಸರುಕುಡಿಕೆ ಉತ್ಸವ ಸಮಿತಿ ಆಶ್ರಯದಲ್ಲಿ ದಿ. ಟಿ.ರಾಧಾಕೃಷ್ಣ ಭಟ್ ಇವರ ಸ್ಮರಣಾರ್ಥ ಹೊನಲು ಬೆಳಕಿನ ಪುರುಷರ ಮ್ಯಾಟ್ ಅಂಕಣದ ಮುಕ್ತ ಕಬಡ್ಡಿ ಪಂದ್ಯಾಟ ಇಂದು (ಆ.24) ಬೆಳಿಗ್ಗೆ 10 ಗಂಟೆಯಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ.
ಕಬಡ್ಡಿ ಅಂಕಣದ ಉದ್ಘಾಟನೆಯನ್ನು ಹೋಟೆಲ್ ಅಶ್ವಿನ್ ಮಾಲಕರಾದ ಅಶ್ವಿನ್ ರೈ ನೆರವೇರಿಸಲಿದ್ದಾರೆ.
ಶ್ರೀ ಮಹಾಲಿಂಗೇಶ್ವರ ದೇವಳದ ವಠಾರದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾದ ಸುಜೀಂದ್ರ ಪ್ರಭು ಸಭಾಧ್ಯಕ್ಷತೆ ವಹಿಸಲಿದ್ದಾರೆ.
ಹಲವು ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.



























