ಎಲ್ಲ ಶಾಸಕರ ಅಭಿಪ್ರಾಯ ಆಲಿಸುವುದಕ್ಕಾಗಿ ವರಿಷ್ಠರು ಪ್ರತ್ಯೇಕ ವ್ಯವಸ್ಥೆ ಮಾಡಬೇಕು” ಎಂದು ಸರ್ಕಾರದ ಮುಖ್ಯ ಸಚೇತಕ, ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಒತ್ತಾಯಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, “ಕಳೆದ 3 ದಿನದಿಂದ ಮಾಧ್ಯಮದಲ್ಲಿ ಬರುತ್ತಿರುವ ಹೇಳಿಕೆಗಳು ಪಕ್ಷದ ಹಿತದೃಷ್ಟಿಯಿಂದ ಒಳಿತಲ್ಲ. ಈ ಅಭಿಪ್ರಾಯಗಳೇ ಎಲ್ಲ ಶಾಸಕರು ಮತ್ತು ಕಾರ್ಯಕರ್ತರ ಅಭಿಪ್ರಾಯ ಆಗುವುದೂ ಇಲ್ಲ. ನಮ್ಮ ಅಭಿಪ್ರಾಯಗಳನ್ನು ಮಾಧ್ಯಮದ ಮುಂದೆ ಹೇಳಲು ಸಾಧ್ಯವಿಲ್ಲವಾದ್ದರಿಂದ ಪಕ್ಷದ ವರಿಷ್ಠರು ನಮ್ಮ ಅಭಿಪ್ರಾಯ ಆಲಿಸಲು ಪ್ರತ್ಯೇಕ ವ್ಯವಸ್ಥೆ ಮಾಡಬೇಕು” ಎಂದಿದ್ದಾರೆ.
ಇನ್ನು ಈ ಟ್ವೀಟ್ ಅನ್ನು ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮತ್ತು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರಿಗೆ ಟ್ಯಾಗ್ ಮಾಡಿದ್ದಾರೆ.ಈ ಹಿಂದೆ ಜಿಂದಾಲ್ ಕಂಪನಿಗೆ 3667 ಎಕರೆ ಭೂಮಿಯನ್ನು ಮಾರಾಟ ಮಾಡಿದ ಕ್ರಮವನ್ನು ವಿರೋಧಿಸಿ ಶಾಸಕ ಸುನಿಲ್ ಕುಮಾರ್ ಪತ್ರ ಬರೆದಿದ್ದು, ಅದಕ್ಕೂ ಮುನ್ನ ರಾಜ್ಯದಲ್ಲಿ ಮೋದಿ ಮಾದರಿಯ ಆಡಳಿತಕ್ಕಾಗಿ ಚರ್ಚಿಸುವಂತೆ ಶಾಸಕರ ಸಭೆ ಕರೆಯಬೇಕು ಎಂದೂ ಸುನಿಲ್ ಪತ್ರ ಬರೆದಿದ್ದರು.