ವಿಟ್ಲ : ಭಾರೀ ಮಳೆಯಿಂದಾಗಿ ಪೊಲೀಸ್ ಠಾಣೆಯ ವಸತಿ ಗೃಹದ ತಡೆಗೋಡೆ ಮನೆಯಂಗಳಕ್ಕೆ ಕುಸಿದ ಘಟನೆ ವಿಟ್ಲದ ಪೊನ್ನೊಟ್ಟು ಎಂಬಲ್ಲಿ ನಡೆದಿದೆ.
ವಿಟ್ಲ ಪೊಲೀಸ್ ಠಾಣೆಯ ಸಿಬ್ಬಂದಿಗಳು ವಾಸವಿರುವ ವಸತಿಗೃಹದ ಹಿಂಬದಿಯಲ್ಲಿದ್ದ ತಡೆಗೋಡೆ ಮತ್ತು ಧರೆ ಪಕ್ಕದಲ್ಲಿ ವಾಸವಿರುವ ಆಯಿಷಾ ಪೊನ್ನೊಟ್ಟು ಎಂಬವರ ಮನೆ ಮೇಲೆ ಬಿದ್ದಿದೆ. ಇದರಿಂದ ಮನೆಗೆ ಹಾನಿಯಾಗಿದೆ.
ಇನ್ನಷ್ಟು ಮಣ್ಣು ಕುಸಿಯುವ ಸಾಧ್ಯತೆಯಿದೆ.



























