ರಾಜ್ಯದಲ್ಲಿ ಕೋವಿಡ್ 19 ಸೋಂಕಿನಿಂದಾಗಿ ಅರ್ಚಕರು ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರುವ ಕಾರಣ ಸರಕಾರದಿಂದ ತಸ್ತಿಕ್ ಭತ್ತೆ ನೀಡಲು ಆದೇಶಿಸಿದನ್ನು ವಿಶ್ವ ಹಿಂದು ಪರಿಷತ್ ಸ್ವಾಗತಿಸುತ್ತದೆ ಆದರೆ ಅದೇ ಆದೇಶದ ಪ್ರಕಾರ ತಸ್ತಿಕ್ ಹಣವನ್ನು ಧಾರ್ಮಿಕ ದತ್ತಿ ಇಲಾಖೆಯಿಂದ ದಕ್ಷಿಣಕನ್ನಡ ಜಿಲ್ಲೆಯ 41 ಮಸೀದಿ, ಮದರಸದ ಮೌಲ್ವಿಗಳಿಗೆ ನೀಡಲು ನಿರ್ಧರಿಸಿದ್ದನ್ನು ವಿಶ್ವ ಹಿಂದು ಪರಿಷದ್ ವಿರೋಧಿಸುತ್ತದೆ ಎಂದು ವಿ.ಹಿಂ.ಪ ಮುಖಂಡ ಶರಣ್ ಪಂಪ್ ವೆಲ್ ಹೇಳಿದ್ದಾರೆ.
ದೈವಸ್ಥಾನ, ದೇವಸ್ಥಾನದ ಹಣವನ್ನು ಹಿಂದೂಗಳಿಗೆ ಮತ್ತು ದೇವಸ್ಥಾನದ ಕಾರ್ಯಗಳಿಗೆ ಮಾತ್ರ ಉಪಯೋಗಿಸಬೇಕು ವಿನಹ ಮಸೀದಿ, ಮದರಸಗಳಿಗೆ ಉಪಯೋಗಿಸುವುದನ್ನು ಖಂಡಿಸುತ್ತೇವೆ ಎಂದು ಶರಣ್ ಪಂಪ್ವೆಲ್ ಹೇಳಿದ್ದಾರೆ.