ಬೆಳ್ತಂಗಡಿ : ಪಟ್ಟಣ ಪಂಚಾಯತ್‌ನ ಚುನಾವಾಣೆಯಲ್ಲಿ ಅಧ್ಯಕ್ಷರಾಗಿ ಬಿಜೆಪಿ ಸದಸ್ಯರಾದ ಜಯಾನಂದ ಗೌಡ ಹಾಗೂ ಉಪಾಧ್ಯಕ್ಷೆಯಾಗಿ ಗೌರಿ ಆಯ್ಕೆಯಾಗಿದ್ದಾರೆ.
ಪ.ಪಂ. ಎರಡನೇ ಅವಧಿಗೆ ಅಧ್ಯಕ್ಷ ಸ್ಥಾನ ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾತಿ ಪ್ರಕಟಗೊಂಡಿತ್ತು.
ಚುನಾವಣಾಧಿಕಾರಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಮುಂದಾಳತ್ವದಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಅಧ್ಯಕ್ಷ, ಉಪಾಧ್ಯಕ್ಷೆ ಆಯ್ಕೆಯಾಗಿದೆ.
ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ, ಪ.ಪಂ. ಮುಖ್ಯಾಧಿಕಾರಿ ರಾಜೇಶ್, ಸದಸ್ಯರಾದ ರಜನಿ ಕುಡ್ವ, ಶರತ್ ಶೆಟ್ಟಿ, ಅಂಬರೀಶ್, ಲೋಕೇಶ್ ಉಪಸ್ಥಿತರಿದ್ದರು.



























