ಪುತ್ತೂರು : ಅರುಣ್ ಕುಮಾರ್ ಪುತ್ತಿಲ ಅವರ ಜೊತೆ ಸಂಭಾಷಣೆಯ ಆಡಿಯೋ ವೈರಲ್ ಗೆ ಸಂಬಂಧಿಸಿದಂತೆ ಬೆದರಿಕೆ ಕರೆ ಬರುತ್ತಿರುವುದಾಗಿ ಆರೋಪಿಸಿ ಮಹಿಳೆ ಆ.29ರಂದು ರಾತ್ರಿ ಪುತ್ತೂರು ನಗರ ಪೊಲೀಸ್ ಠಾಣೆಗೆ ಬಂದಿದ್ದರು ಎಂದು ತಿಳಿದು ಬಂದಿದೆ.
ಆಡಿಯೋ ವೈರಲ್ ಬಳಿಕ ಮಹಿಳೆಗೆ ಹಲವಾರು ಬೆದರಿಕೆ ಕರೆ ಬಂದಿದ್ದು, ಈ ನಿಟ್ಟಿನಲ್ಲಿ ಪುತ್ತೂರು ನಗರ ಪೊಲೀಸ್ ಠಾಣೆಗೆ ರಾತ್ರಿ ಬಂದು ಪೊಲೀಸ್ ಇನ್ಸ್ಪೆಕ್ಟರ್ ಜೊತೆ ಮಾತುಕತೆ ನಡೆಸಿದ್ದಾರೆ.
ತಡರಾತ್ರಿ ಠಾಣೆಗೆ ಬಂದ ಮಹಿಳೆಯನ್ನು ಬಳಿಕ ಆಟೋ ರಿಕ್ಷಾದಲ್ಲಿ ತೆರಳುವಂತೆ ಸೂಚಿಸಿದ ಪೊಲೀಸರು ಹಿಂದಿನಿಂದ ಪೊಲೀಸ್ ಜೀಪಿನಲ್ಲಿ ಮನೆಯ ತನಕ ಭದ್ರತೆ ನೀಡಿದರು ಎಂದು ತಿಳಿದು ಬಂದಿದೆ.


























