ಪುತ್ತೂರು : ಕುಂತೂರು ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡದ ಗೋಡೆ, ಛಾವಣಿ ಕುಸಿದು ಬಿದ್ದು ನಾಲ್ಕು ಮಂದಿ ವಿದ್ಯಾರ್ಥಿಗಳು ಗಾಯಗೊಂಡು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದು, ಮಾಜಿ ಶಾಸಕಿ ಶಕುಂತಲಾ ಟಿ ಶೆಟ್ಟಿ ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಯೋಗ ಕ್ಷೇಮ ವಿಚಾರಿಸಿದರು.

ಮಕ್ಕಳಿಗೆ ಧೈರ್ಯ ತುಂಬಿದ ಅವರು ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.
ಶಕುಂತಲಾ ಟಿ ಶೆಟ್ಟಿ ಅವರೊಂದಿಗೆ ಹಲವು ಪ್ರಮುಖರು ಉಪಸ್ಥಿತರಿದ್ದರು.


























