ವಿಟ್ಲ : ಗಣೇಶೋತ್ಸವ ಹಾಗೂ ಈದ್ ಮಿಲಾದ್ ಹಬ್ಬಗಳ ಆಚರಣೆಗೆ ಸಂಬಂಧಿಸಿದಂತೆ ಧಾರ್ಮಿಕ ಮುಖಂಡರ ಜೊತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಸಭೆ ನಡೆಯಿತು.

ಶಾಂತಿಯುತವಾಗಿ ಹಬ್ಬಗಳ ಆಚರಣೆ ನಡೆಸಿಕೊಡುವಂತೆ ಹಾಗೂ ಅಹಿತಕರ ಘಟನೆಗಳಿಗೆ ಅವಕಾಶಕೊಡದಂತೆ ಕಾರ್ಯಕ್ರಮ ಮಾಡುವಂತೆ ಸಂಘಟಕರಲ್ಲಿ ಠಾಣಾಧಿಕಾರಿ ತಿಳಿಸಿದರು.

ಹಲವು ಪ್ರಮುಖರು ಈ ವೇಳೆ ಉಪಸ್ಥಿತರಿದ್ದು, ಸಲಹೆ ನೀಡಿದರು.




























