ಬೆಳಗಾವಿ : ದುಬೈನ ಓಮಾನ್ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗೋಕಾಕ್ ನಗರದ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ.
ವಿಜಯಾ ತಹಶಿಲ್ದಾರ, ಪೂಜಾ, ಪವನ್ ಕುಮಾರ, ಆದಿಶೇಷ ಮೃತರು. ಕುಟುಂಬ ದುಬೈನ ಓಮಾನ್ಗೆ ಪ್ರವಾಸಕ್ಕೆ ತೆರಳಿತ್ತು.
ಹೈಮಾ ಎಂಬ ಪ್ರದೇಶದಲ್ಲಿ ಕುಟುಂಬ ತೆರಳುತ್ತಿದ್ದ ಕಾರು ಹಾಗೂ ಲಾರಿ ಮುಖಾಮುಖಿ ಡಿಕ್ಕಿಯಾಗಿವೆ. ಇದರಿಂದ ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ನಾಲ್ವರು ಸಜೀವ ದಹನವಾಗಿದ್ದಾರೆ.
ಮೃತರ ಮೃತದೇಹಗಳನ್ನು ಭಾರತಕ್ಕೆ ತರಲು ಅನುಕೂಲ ಮಾಡುವಂತೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ವಿದೇಶಾಂಗ ಸಚಿವ ಎಸ್ ಜೈಶಂಕರ್ ಹಾಗೂ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಮನವಿ ಮಾಡಿದ್ದಾರೆ.



























