ಮುಕ್ಕೂರು : ಕುಂಡಡ್ಕ -ಮುಕ್ಕೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ15ನೇ ವರ್ಷದ ಗಣೇಶೋತ್ಸವ ಮೂರೈದು ಸೆ.7 ಮತ್ತು 8 ರಂದು ಮುಕ್ಕೂರು ವಠಾರದಲ್ಲಿ ನಡೆಯಲಿದೆ.
ಸೆ.7 ರಂದು ಬೆಳಗ್ಗೆ ಕ್ರೀಡಾಕೂಟವನ್ನು ಇಂಜಿನಿಯರ್ ನರಸಿಂಹ ತೇಜಸ್ವಿ ಉದ್ಘಾಟಿಸಲಿದ್ದಾರೆ. ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ತಾರಾನಾಥ ಕುಂಡಡ್ಕ ಅಧ್ಯಕ್ಷತೆ ವಹಿಸಲಿದ್ದಾರೆ. ಪ್ರಗತಿಪರ ಕೃಷಿಕರಾದ ಸುಬ್ರಾಯ ಭಟ್ ನೀರ್ಕಜೆ, ಉಮೇಶ್ ಕೆಎಂಬಿ ಸಹಿತ ವಿವಿಧ ಗಣ್ಯರು ಭಾಗವಹಿಸಲಿದ್ದಾರೆ.
ಕ್ರೀಡಾಕೂಟದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು, ಪುರುಷರ ವಿಭಾಗದಲ್ಲಿ ವಾಲಿಬಾಲ್, ಹಗ್ಗಜಗ್ಗಾಟ, ಮಹಿಳಾ ವಿಭಾಗದಲ್ಲಿ ತ್ರೋಬಾಲ್, ಹಗ್ಗಜಗ್ಗಾಟ ಸ್ಪರ್ಧೆ ನಡೆಯಲಿದ್ದು, ಸಾರ್ವಜನಿಕರಿಗೆ ಮುಕ್ತ ಪ್ರವೇಶ ಕಲ್ಪಿಸಲಾಗಿದೆ.
ಸೆ.8 ರಂದು ಬೆಳಗ್ಗೆ 8 ಗಂಟೆಗೆ ಗಣಪತಿ ಹವನ ನಡೆಯಲಿದೆ. ರಾತ್ರಿ ಸಭಾ ಕಾರ್ಯಕ್ರಮವನ್ನು ನಳೀಲು ಶ್ರೀ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮೊಕ್ತೇಸರ ಸಂತೋಷ್ ಕುಮಾರ್ ರೈ ಉದ್ಘಾಟಿಸಲಿದ್ದಾರೆ. ಪೆರುವಾಜೆ ಗ್ರಾ.ಪಂ.ಅಧ್ಯಕ್ಷ ಜಗನ್ನಾಥ ಪೂಜಾರಿ ಮುಕ್ಕೂರು ಅಧ್ಯಕ್ಷತೆ ವಹಿಸಲಿದ್ದಾರೆ.
ಪುತ್ತೂರು ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ, ಡಿಸಿಸಿ ಬ್ಯಾಂಕ್ ನಿರ್ದೇಶಕ ಎಸ್ .ಎನ್. ಮನ್ಮಥ, ವೈದ್ಯ ಡಾ.ನರಸಿಂಹ ಶರ್ಮಾ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ವಿವಿಧ ಕ್ಷೇತ್ರದ ಸಾಧನೆಗಾಗಿ ಕುಂಬ್ರ ದಯಾಕರ ಆಳ್ವ, ಹೊನ್ನಪ್ಪ ಗೌಡ ಚಾಮುಂಡಿಮೂಲೆ ಅವರಿಗೆ ಸಮ್ಮಾನ ನಡೆಯಲಿದ್ದು, ಎಣ್ಮೂರು ಸರಕಾರಿ ಪ್ರೌಢಶಾಲಾ ಶಿಕ್ಷಕ ಲಿಂಗಪ್ಪ ಬೆಳ್ಳಾರೆ ಅಭಿನಂದನಾ ನುಡಿಗಳನ್ನಾಡಿಲಿದ್ದಾರೆ.
ಸೆ.8 ರಂದು ಸಂಜೆ 5 ಗಂಟೆಗೆ ಪೆರುವಾಜೆ ಶ್ರೀ ಜಲದುರ್ಗಾದೇವಿ ಮಕ್ಕಳ ಕುಣಿತ ಭಜನೆ, ಮುಕ್ಕೂರು ಅಂಗನವಾಡಿ ಮತ್ತು ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ಕುರಿಯ ವಿಶ್ವಗುರು ಭರತನಾಟ್ಯ ಕಲಾ ಶಾಲೆಯ ವಿದುಷಿ ಭಾಗ್ಯಶ್ರೀ ರೈ ಪೂವಾಜೆ ಮತ್ತು ವಿಂದ್ಯಾಶ್ರೀ ರೈ ಅವರಿಂದ ಭರತನಾಟ್ಯ ಪ್ರದರ್ಶನಗೊಳ್ಳಲಿದೆ. ರಾತ್ರಿ 8.30 ರಿಂದ ಬಾಲಕೃಷ್ಣ ನೆಟ್ಟಾರು ಮತ್ತು ಬಳಗದಿಂದ ಗಾನ ಸಂಭ್ರಮ ಮೆಲೋಡಿಸ್ ಪ್ರಸ್ತುತ ಪಡಿಸುವ ಸಂಗೀತ ರಸಮಂಜರಿ ನಡೆಯಲಿದೆ.