ಪುತ್ತೂರು : ಅರುಣ್ ಕುಮಾರ್ ಪುತ್ತಿಲ ಹಾಗೂ ಮಹಿಳೆಯೋರ್ವರ ಸಂಭಾಷಣೆಯ ಆಡಿಯೋ ವೈರಲ್ ಆಗಿದ್ದು, ಘಟನೆಗೆ ಸಂಬಂಧಿಸಿದಂತೆ ಮಹಿಳೆ ರಕ್ಷಣೆ ನೀಡುವಂತೆ ಮತ್ತೆ ಪುತ್ತೂರು ನಗರ ಪೊಲೀಸ್ ಠಾಣೆಗೆ ಆಗಮಿಸಿದ್ದಾರೆ ಎಂದು ತಿಳಿದು ಬಂದಿದೆ.
ಆಡಿಯೋ ವೈರಲ್ ಆಗುತ್ತಿದ್ದಂತೆ ಮಹಿಳೆಗೆ ಬೆದರಿಕೆ ಕರೆಗಳು ಬಂದಿದ್ದು, ಈ ಬಗ್ಗೆ ಕೆಲ ದಿನಗಳ ಹಿಂದೆ ಠಾಣೆಗೆ ಆಗಮಿಸಿ ರಕ್ಷಣೆ ನೀಡುವಂತೆ ಕೋರಿದ್ದರೆನ್ನಲಾಗಿದೆ.
ಇಂದು ಮತ್ತೆ ಮಹಿಳೆ ಠಾಣೆಗೆ ಆಗಮಿಸಿದ್ದು, ಮನೆ ಬಳಿ ಜನ ಬರುತ್ತಿದ್ದಾರೆ ರಕ್ಷಣೆ ನೀಡುವಂತೆ ಮನವಿ ಮಾಡಿದ್ದಾರೆ ಎಂದು ವರದಿಯಾಗಿದೆ.
ಈ ಬಗ್ಗೆ ಈವರೆಗೆ ಲಿಖಿತ ದೂರು ನೀಡಿಲ್ಲ ಎಂದು ತಿಳಿದು ಬಂದಿದೆ.