ಪುತ್ತೂರು : ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
ಮಹಿಳೆಯೊಬ್ಬರನ್ನು ಬೆದರಿಸಿ ಇಚ್ಛೆಗೆ ವಿರುದ್ಧವಾಗಿ ಲೈಂಗಿಕ ದೌರ್ಜನ್ಯ ನಡೆಸಿದ್ದು ಬೆದರಿಕೆ ಹಾಕಿರುವುದಾಗಿ ಆರೋಪಿಸಿದ್ದು, ಈ ಬಗ್ಗೆ ಪ್ರಕರಣ ದಾಖಲಾಗಿದೆ.
ಐಪಿಸಿ ಸೆಕ್ಷನ್ 1860 (u/s-417,354(A), 506 ರಂತೆ ಪ್ರಕರಣ ದಾಖಲಾಗಿದೆ.
ಈ ಬಗ್ಗೆ ಪುತ್ತಿಲ ಸ್ಪಷ್ಟನೆ ನೀಡಿದ್ದು, ನನ್ನ ಮೇಲೆ ಸುಳ್ಳು ಆರೋಪ ಹೊರಿಸಿದ್ದಾರೆ. ಇದೊಂದು ಪೂರ್ವಯೋಜಿತ ಕೆಲಸದಂತೆ ಕಾಣುತ್ತಿದೆ. ರಾಜಕೀಯ ಷಡ್ಯಂತ್ರವೂ ಇದರಲ್ಲಿದೆ. ಯಾವುದೇ ಆರೋಪ ಮಾಡುವಾಗ ಸತ್ಯಾಸತ್ಯತೆ ಇರಬೇಕು. ಇದು ದೇವರು ಮೆಚ್ಚುವ ಕೆಲಸವಲ್ಲ. ಎಲ್ಲವನ್ನು ದೇವರು ನೋಡಲಿದ್ದಾರೆ ಎಂದು ಹೇಳಿದ್ದಾರೆ.


























