ಪುತ್ತೂರು : ಪುತ್ತೂರು ಮತ್ತು ಕಡಬ ತಾಲೂಕಿನ ಪ್ರಭಾರ ಆರೋಗ್ಯಾಧಿಕಾರಿಯಾಗಿ ದೀಪಕ್ ರೈ ಯವರ ನೇಮಕವಾಗಿದ್ದಾರೆ. ಇವರು ಪಾಲ್ತಾಡಿ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯಾಧಿಕಾರಿ ಯಾಗಿ ಸೇವೆ ಸಲ್ಲಿಸುತ್ತಿದ್ದರು.
ಈವರೆಗೆ ಆರೋಗ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಅಶೋಕ್ ಕುಮಾರ್ ರವರು ಮುಂದಿನ ಆದೇಶದ ವರೆಗೆ ಪುತ್ತೂರು ಸರಕಾರಿ ಸಾರ್ವಜನಿಕ ಆಸ್ಪತ್ರೆಯ ಹಿರಿಯ ವೈದ್ಯಾಧಿಕಾರಿ ಯಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ
ಡಾ|| ಅಶೋಕ ಕುಮಾರ್ ರೈ, ತಾಲೂಕು ಆರೋಗ್ಯಾಧಿಕಾರಿ, ಪುತ್ತೂರು ಇವರು ಕೋವಿಡ್ 19ಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ಎದುರಿಸಲು ವಿಫಲರಾಗಿರುವುದು ಕಂಡುಬರುತ್ತದೆ.
ಡಾ|| ಅಶೋಕ ಕುಮಾರ್ ರೈ ಇವರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿಕೊಂಡು ಕೆಲಸ ನಿರ್ವಹಿಸುವಲ್ಲಿ ವಿಫಲರಾಗಿರುತ್ತಾರೆ.
ಕೋವಿಡ್ 19ನಿಯಂತ್ರಣ ಕ್ರಮಗಳನ್ನು ವ್ಯವಸ್ಥಿತವಾಗಿ ನಿರ್ವಹಿಸುವ ಉದ್ದೇಶದಿಂದ ಡಾ|| ಅಶೋಕ ಕುಮಾರ್ ರೈ, ಇವರನ್ನು ಬದಲಾಯಿಸಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ, ದ.ಕ. ಮಂಗಳೂರು ಇವರು ವರದಿ ನೀಡಿರುತ್ತಾರೆ.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ, ದ.ಕ. ಮಂಗಳೂರು ಇವರ ವರದಿಯನ್ನು ಪರಿಗಣಿಸಿ, ವಿಪತ್ತು ನಿರ್ವಹಣಾ ಕಾಯ್ದೆ 16ರ ಕಲಂ 4(m), ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧಿನಿಯಮ 12ರ ಕಲಂ 4 ರನ್ವಯ ಹಾಗೂ ಕರ್ನಾಟಕ ಸರಕಾರದ ಆರೋಗ್ಯ ಇಲಾಖೆಯ ಘಟನೋತ್ತರ ಮಂಜೂರಾತಿ ನಿರೀಕ್ಷಣೆ ಮೇರೆಗೆ ಸಾರ್ವಜನಿಕ ಮತ್ತು ಆಡಳಿತ ಹಿತದೃಷ್ಟಿಯಿಂದ ಡಾ. ದೀಪಕ್ ರೈ, ಆಡಳಿತ ಆರೋಗ್ಯಾಧಿಕಾರಿ, ಪ್ರಾಥಮಿಕ ಆರೋಗ್ಯ ಕೇಂದ್ರ, ಪಾಲ್ತಾಡಿ/ಕೊಳ್ತಿಗೆ ಕಡಬ ಹಾಗೂ ಪುತ್ತೂರು ತಾಲೂಕು ಆರೋಗ್ಯಾಧಿಕಾರಿಯನ್ನಾಗಿ ಆದೇಶಿಸಿದೆ.