ಪುತ್ತೂರು : ನಗರಸಭೆಯ ಎರಡನೇ ಅವಧಿಗೆ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ ಇಂದು ನಡೆಯಲಿದ್ದು, ಪ್ರಚಂಡ ಬಹುಮತ ಹೊಂದಿರುವ ಬಿಜೆಪಿ ನಾಮಪತ್ರ ಸಲ್ಲಿಕೆಗೆ ಕೆಲವೇ ಕ್ಷಣಗಳ ಮೊದಲು ತನ್ನ ಸ್ಪರ್ಧಾಳುಗಳ ಹೆಸರನ್ನು ಘೋಷಿಸಿದೆ.

ಎಸ್.ಸಿ ಮಹಿಳೆಗೆ ಮೀಸಲಾಗಿದ್ದ ಅಧ್ಯಕ್ಷ ಹುದ್ದೆಗೆ ಲೀಲಾವತಿಯವರನ್ನು ಆಯ್ಕೆ ಮಾಡಲಾಗಿದೆ. ಉಪಾಧ್ಯಕ್ಷ ಹುದ್ದೆಗೆ ಬಾಲಚಂದ್ರ ಹಾಗೂ ಸ್ಥಾಯಿ ಸಮಿತಿ ಅಧ್ಯಕ್ಷ ಹುದ್ದೆಗೆ ಸುಂದರ ಪೂಜಾರಿ ಬಡಾವು ರನ್ನು ಆಯ್ಕೆ ಮಾಡಲಾಗಿದೆ.
31 ಸದಸ್ಯರ ನಗರಸಭೆಯಲ್ಲಿ ಬಿಜೆಪಿ ಬಳಿ 25 ಸದಸ್ಯರಿದ್ದಾರೆ. ಹೀಗಾಗಿ ಈ ಚುನಾವಣೆಯಲ್ಲಿ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ. ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆ ಹೆಚ್ಚಿದೆ.

























