ಉಪ್ಪಿನಂಗಡಿ : ಹೊಸ ಬಸ್ ನಿಲ್ದಾಣದ ಬಳಿಯ ನೇತ್ರಾವತಿ ನದಿಯ ಬದಿ ಮೊಸಳೆಯೊಂದು ಪತ್ತೆಯಾಗಿರುವುದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ.
ನದಿಯ ಬದಿಯಲ್ಲಿ ಮಂಗಳವಾರ ಸಂಜೆ ಮೊಸಳೆಯೊಂದು ಮರಳ ದಿಬ್ಬದಲ್ಲಿ ವಿರಮಿಸುತ್ತಿರುವುದನ್ನು ಗಮನಿಸಿ ಫೋಟೋ ಕ್ಲಿಕ್ಕಿಸಿದ್ದಾರೆ.
ಮೊಸಳೆ ಕಂಡು ಬಂದ ಸ್ಥಳದಿಂದ ಸುಮಾರು 500 ಮೀ. ದೂರದಲ್ಲಿ ನೇತ್ರಾವತಿ- ಕುಮಾರಧಾರ ನದಿಗಳು ಸಂಗಮವಾಗುತ್ತಿದ್ದು, ಅಲ್ಲೇ ಇರುವ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಾಲಯದ ಬಳಿಯ ಸ್ನಾನಘಟ್ಟದಲ್ಲಿ ಪಿಂಡ ಪ್ರದಾನ ಕಾರ್ಯ, ತೀರ್ಥ ಸ್ನಾನಗಳು ನಿರಂತರ ನಡೆಯುತ್ತಿವೆ. ಇದೀಗ ಈ ಸ್ಥಳದಲ್ಲಿ ಮೊಸಳೆ ಕಂಡು ಬಂದಿರುವುದು ಹಲವರ ಆತಂಕಕ್ಕೆ ಕಾರಣವಾಗಿದೆ.

























