ಮಂಗಳೂರು : ಪಿಲಿಕುಳ ನಿಸರ್ಗಧಾಮದ ಕಂಬಳದ ಕರೆಗೆ ಮುಹೂರ್ತ ಹಾಗೂ ಪಿಲಿಕುಳ ಕಂಬಳದ ಪೂರ್ವಭಾವಿ ಸಭೆ ಇಂದು ನಡೆಯಿತು.

ಕೆಪಿಸಿಸಿ ಕಾರ್ಯಧ್ಯಕ್ಷ ಹಾಗೂ ಶಾಸಕ ಮಂಜುನಾಥ ಭಂಡಾರಿ ಮುಹೂರ್ತ ನೆರವೇರಿಸಿದರು. ಬಳಿಕ ಕಂಬಳದ ಪೂರ್ವಭಾವಿ ಸಭೆ ನಡೆಯಿತು.

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾದ ಮುಲ್ಲೈ ಮುಹಿಲನ್, ಜಿಲ್ಲಾ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್, ಮೂಡ ಕಮಿಷನರ್ ನೂರ್ಜಹಾನ್ ಖ್ನಮ್, ಕಂಬಳ ಸಮಿತಿಯ ಅಧ್ಯಕ್ಷರಾದ ದೇವಿ ಪ್ರಸಾದ್ ಶೆಟ್ಟಿ, ಮೋಹನ್ ಆಳ್ವ ಹಾಗೂ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.




























