ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರು ಜಿಲ್ಲೆಯ ಖಾಸಗಿ ಆಸ್ಪತ್ರೆಗಳಲ್ಲಿ ಆಯುಷ್ಮಾನ್ ಭಾರತ್ ಯೋಜನೆ ಮತ್ತು ಇ.ಎಸ್.ಐ., ವಿಮೆಯಡಿಯಲ್ಲಿ ಚಿಕಿತ್ಸೆ ಪಡೆದು, ಮಾಹಿತಿ ಕೊರತೆಯಿಂದಾಗಿ ಹೆಚ್ಚಿನ ಮೊತ್ತದ ಬಿಲ್ ನೀಡುತ್ತಿರುವ ಕುರಿತು ಸಾರ್ವಜನಿಕರಿಂದ ದೂರು ಬಂದಿರುವ ಹಿನ್ನೆಲೆಯಲ್ಲಿ, ಜಿಲ್ಲೆಯ ಎಲ್ಲಾ ಆಸ್ಪತ್ರೆಗಳಿಗೆ ನೋಡಲ್ ಅಧಿಕಾರಿಗಳಾಗಿ ನಿಯೋಜಿಸಿರುವ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯು ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿಯವರ ನೇತೃತ್ವದಲ್ಲಿ ಜೂ.9 ರಂದು ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ನಡೆಯಿತು.
ಸಭೆಯಲ್ಲಿ ಶಾಸಕರಾದ ಡಾ. ಭರತ್ ಶೆಟ್ಟಿ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ. ವಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳುಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.