ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಪೊಲೀಸರು ಚಾರ್ಜ್ಶೀಟ್ ಸಲ್ಲಿಕೆ ಮಾಡಿದ್ದಾರೆ. ದರ್ಶನ್ ಸೇರಿ ಅನೇಕರ ವಿರುದ್ಧ ಪ್ರಬಲ ಸಾಕ್ಷಿಗಳು ಸಿಕ್ಕಿದ್ದು, ದೋಷಾರೋಪ ಪಟ್ಟಿಯಲ್ಲಿ ವಿವರಣೆ ನೀಡಲಾಗಿದೆ. ಈ ಮಧ್ಯೆ ರೇಣುಕಾ ಸ್ವಾಮಿ ಕೈ ಮುಗಿದು ಅಂಗಲಾಚುತ್ತಿರುವ ಫೋಟೋ ಲಭ್ಯವಾಗಿದೆ.
ಈ ಫೋಟೋ ನೋಡಿದವರ ಕರುಳು ಚುರಕ್ ಎಂದಿದೆ. ಪಟ್ಟಣಗೆರೆ ಶೆಡ್ನಲ್ಲಿ ಕೊಲೆ ಮಾಡುವ ಸಂದರ್ಭದಲ್ಲಿ ತೆಗೆದ ಫೋಟೋ ಇದಾಗಿದೆ.
ಚಿತ್ರದುರ್ಗದ ರೇಣುಕಾ ಸ್ವಾಮಿಯನ್ನು ಪಟ್ಟಣಗೆರೆಯಲ್ಲಿರುವ ಶೆಡ್ಗೆ ಕರೆದುಕೊಂಡು ಹೋಗಲಾಗಿತ್ತು. ಇದೆಲ್ಲ ಪ್ಲ್ಯಾನ್ ಮಾಡಿದ್ದು ದರ್ಶನ್ ಎನ್ನುವ ಆರೋಪ ಇದೆ.
ರೇಣುಕಾ ಸ್ವಾಮಿ ಅಂಗಲಾಚುತ್ತಿರುವ ಫೋಟೋ ಮಾತ್ರವಲ್ಲದೆ ಅವರು ಶವವಾಗಿ ಬಿದ್ದ ಫೋಟೋಗಳು ಸಿಕ್ಕಿವೆ. ಆರೋಪಿಗಳ ಮೊಬೈಲ್ನಲ್ಲಿ ಇದನ್ನು ಸೆರೆಹಿಡಿದುಕೊಳ್ಳಲಾಗಿತ್ತು. ಆ ಬಳಿಕ ಇದನ್ನು ಡಿಲೀಟ್ ಮಾಡಿದ್ದರು. ಈಗ ಈ ಫೋಟೋಗಳನ್ನು ರಿಟ್ರೀವ್ ಮಾಡಲಾಗಿದೆ. ಚಾರ್ಜ್ಶೀಟ್ನಲ್ಲಿ ಈ ಫೋಟೋಗಳನ್ನು ಲಗತ್ತಿಸಲಾಗಿದೆ. ಇದು ಪ್ರಕರಣದಲ್ಲಿ ಪ್ರಮುಖ ಸಾಕ್ಷಿ ಆಗುವ ಸಾಧ್ಯತೆ ಇದೆ.



























