ಬೆಳ್ತಂಗಡಿ : ಶಂಕಿತ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಗಂಡಿಬಾಗಿಲಿನ ದೇವಗಿರಿಯ ಬೈಕಾಟ್ ನಿವಾಸಿ ಜೋಸ್- ಮೆಡ್ಸಿ ದಂಪತಿ ಪುತ್ರಿ ಟಿನು (27) ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು.
ಬೆಂಗಳೂರಿನಲ್ಲಿ ನರ್ಸ್ ಆಗಿದ್ದ ಟಿನು ಅವರಿಗೆ ಶಿವಮೊಗ್ಗ ಜಿಲ್ಲೆಯ ಸಾಗರದ ಸೋಬಿಟ್ ಅವರೊಂದಿಗೆ ಎರಡೂವರೆ ವರ್ಷಗಳ ಹಿಂದೆ ವಿವಾಹವಾಗಿತ್ತು.
ಒಂದು ವಾರದಿಂದ ಅಸ್ವಸ್ಥಗೊಂಡಿದ್ದ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು.