ಮಂಗಳೂರು : ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಬಿಎಂಡಬ್ಲ್ಯೂ ಕಾರೊಂದು ಬೆಂಕಿಗೆ ಆಹುತಿಯಾಗಿರುವ ಘಟನೆ ಸುರತ್ಕಲ್ ಎನ್.ಐ.ಟಿ.ಕೆ ಹಳೆ ಟೋಲ್ ಗೇಟ್ ಬಳಿ ನಡೆದಿದೆ.

ಸುಟ್ಟು ಕರಕಲಾದ ಕಾರು ಉಡುಪಿ ಕಡೆಯಿಂದ ರಾಷ್ಟ್ರೀಯ ಹೆದ್ದಾರಿಯಾಗಿ ಮಂಗಳೂರು ಕಡೆ ತೆರಳುತ್ತಿತ್ತು ಎನ್ನಲಾಗಿದೆ.
ಎನ್.ಐ.ಟಿ.ಕೆ ಬಳಿ ಏಕಾಏಕಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಸುಟ್ಟು ಭಸ್ಮವಾಗಿದೆ ಎಂದು ತಿಳಿದು ಬಂದಿದೆ. ಕಾರಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.



























