ಹಿಂದೂ ಧಾರ್ಮಿಕ ದತ್ತಿ ಇಲಾಖೆಯಿಂದ ದಕ್ಷಿಣ ಕನ್ನಡ ಜಿಲ್ಲೆಯ 41 ಮಸೀದಿ, ಮದರಸದ ಮೌಲ್ವಿಗಳಿಗೆ ತಸ್ತಿಕ್ ಭತ್ತೆ ನೀಡಲು ನಿರ್ಧಾರ ಮಾಡಿರುವ ಆದೇಶವನ್ನು ಹಿಂಪಡೆಯಬೇಕೆಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮಂಗಳೂರು ವಿಶ್ವ ಹಿಂದೂ ಪರಿಷದ್ ಬಜರಂಗದಳ ಮನವಿ ಸಲ್ಲಿಸಿದೆ.
ಈ ಸಂದರ್ಭದಲ್ಲಿ ವಿ.ಹಿಂ.ಪ ಮುಖಂಡ ಶರಣ್ ಪಂಪ್‌ವೆಲ್, ಜಿಲ್ಲಾ ಅಧ್ಯಕ್ಷ ಗೋಪಾಲ್ ಕುತ್ತಾರ್, ಜಿಲ್ಲಾ ಕಾರ್ಯದರ್ಶಿ ಶಿವಾನಂದ್ ಮೆಂಡನ್, ಜಿಲ್ಲಾ ಉಪಾಧ್ಯಕ್ಷರು ಮನೋಹರ್ ಸುವರ್ಣ, ಜಿಲ್ಲಾ ಸಂಚಾಲಕ್ ಪುನೀತ್ ಅತ್ತಾವರ ಉಪಸ್ಥಿತರಿದ್ದರು.