ಪುತ್ತೂರು : ನಗರಸಭೆ ವ್ಯಾಪ್ತಿಯಲ್ಲಿ ವಿವಿಧ ಕಡೆ ಗಣೇಶೋತ್ಸವ ಕಾರ್ಯಕ್ರಮಗಳು ನಡೆಯಲಿದ್ದು, ಗಣೇಶೋತ್ಸವದ ಶೋಭಾಯಾತ್ರೆಗೆ ಮೊದಲು, ನಗರ ವ್ಯಾಪ್ತಿಯಲ್ಲಿ ಗುಂಡಿ ಬಿದ್ದ ರಸ್ತೆಗಳನ್ನು ತುರ್ತು ದುರಸ್ಥಿಗೊಳಿಸುವಂತೆ ನಗರಸಭೆಯ ನೂತನ ಅಧ್ಯಕ್ಷೆ ಲೀಲಾವತಿ ಮತ್ತು ಉಪಾಧ್ಯಕ್ಷ ಬಾಲಚಂದ್ರ ಅವರು ಪೌರಾಯುಕ್ತರಿಗೆ ನಿರ್ದೇಶನ ನೀಡಿದ್ದಾರೆ.
ನಗರಸಭೆ ವ್ಯಾಪ್ತಿಯ ಮುಖ್ಯ ರಸ್ತೆ ಸಹಿತ ಹಲವು ಮಾರ್ಗದಲ್ಲಿ ಗಣೇಶೋತ್ಸವದ ಶೋಭಾಯಾತ್ರೆ ವಾಹನ ಸಂಚರಿಸಲಿದೆ. ರಸ್ತೆಯಲ್ಲಿ ಅಲ್ಲಲ್ಲಿ ಗುಂಡಿ ಬಿದ್ದಿರುವುದರಿಂದ ಶೋಭಾಯಾತ್ರೆಗೆ ತೊಂದರೆ ಆಗಲಿದೆ. ಇದರ ಜೊತೆಗೆ ಶ್ರೀ ಗಣೇಶನ ವಿಗ್ರಹ ಜಲಸ್ಥಂಭನಗೊಳಿಸುವ ಕಡೆಯಲ್ಲೂ ಪೊದೆಗಳು ತುಂಬಿದೆ. ಅವನ್ನೆಲ್ಲ ನಗರಸಭೆಯಿಂದ ಸ್ವಚ್ಛಗೊಳಿಸುವ ಕಾರ್ಯ ತುರ್ತಾಗಿ ಮಾಡಿಸುವಂತೆ ಸೂಚನೆ ನೀಡಿದ್ದಾರೆ.

























