ಮಂಗಳೂರು : ರಾಜ್ಯದ ಅಧಿಕೃತ ಭಾಷೆಯ ಸ್ಥಾನಮಾನ ಹಾಗೂ ಸಂವಿಧಾನದ 8ನೇ ಪರಿಚ್ಛೇದದಡಿ ತುಳು ಭಾಷೆ ಸೇರುವ ಅವಕಾಶವನ್ನು ಸರಕಾರ ಕಲ್ಪಿಸದಿದ್ದರೂ ತುಳು ಲಿಪಿ ಈಗ ‘ಯುನಿಕೋಡ್’ಗೆ ಸೇರ್ಪಡೆಯಾಗುವ ಮೂಲಕ ಮಹತ್ವದ ಮೈಲಿಗಲ್ಲು ದಾಖಲಿಸಿದೆ.
ತುಳು ವಿಕಿಪೀಡಿಯಾ, ಗೂಗಲ್ ನಲ್ಲಿ ತುಳು ಅನುವಾದದ ಅವಕಾಶ ಒದಗಿದ ಬಳಿಕ ತುಳು ಭಾಷಿಕರಿಗೆ ಈಗ ಯುನಿಕೋಡ್‌ನಲ್ಲಿ ತುಳು ಲಭ್ಯವಾಗಿರುವುದು ಉಲ್ಲೇಖನೀಯ ಅಂಶ.
ಯುನಿಕೋಡ್ ಆವೃತ್ತಿ 16ರಲ್ಲಿ ತುಳು ಸೇರ್ಪಡೆಯಾಗಿದೆ. ಸದ್ಯ ಒಟ್ಟು 80 ಅಕ್ಷರ ಸೇರಿಸಲಾಗಿದೆ.
ಯುನಿಕೋಡ್‌ನಲ್ಲಿ ತುಳು ಲಭ್ಯವಾಗಿರುವ ಕಾರಣ ನ್ಯಾಚುರಲ್ ಲಾಂಗ್ವೇಜ್ ಪ್ರೊಸೆಸಿಂಗ್, ಟೆಕ್ಸ್ಟ್ ಟು ಸ್ಪೀಚ್, ಸ್ಪೀಚ್ ಟು ಟೆಕ್ಸ್ಟ್, ಆರ್ಟಿ ಫಿಶಿಯಲ್ ಇಂಟೆಲಿಜೆನ್ಸ್ ಇವೆಲ್ಲ ವನ್ನೂ ಮಾಡಲು ಸಾಧ್ಯವಾಗಲಿದೆ.
ಗೂಗಲ್‌ನಲ್ಲಿ ಈಗಾಗಲೇ ಇಂಗ್ಲಿಷ್ ಟು ತುಳು ಟ್ರಾನ್ಸ್‌ಲೇಶನ್ ಒದಗಿರುವ ಕಾರಣ ಯುನಿಕೋಡ್‌ನಲ್ಲಿ ಹಲವು ಸಾಧ್ಯತೆಗಳು ಮುಂದಿನ ದಿನಗಳಲ್ಲಿ ತೆರೆದುಕೊಳ್ಳುವ ನಿರೀಕ್ಷೆ ಮೂಡಿದೆ.