ಮಂಗಳೂರು : ರಸ್ತೆ ದಾಟುತ್ತಿರುವ ವೇಳೆ ಮಹಿಳೆಯೊಬ್ಬರಿಗೆ ಏಕಾಏಕಿ ಆಟೋ ರಿಕ್ಷಾ ಡಿಕ್ಕಿ ಹೊಡೆದಿದ್ದು, ಪರಿಣಾಮ ರಭಸದಿಂದ ಬಂದ ಆಟೋ ಮಹಿಳೆಯ ಮೇಲೆ ಮಗುಚಿ ಬಿದ್ದಿದೆ. ಇದನ್ನು ಕಂಡ ಬಾಲಕಿ ಹೆದರದೇ ತಕ್ಷಣ ತನ್ನ ತಾಯಿಯ ರಕ್ಷಣೆಗೆ ಧಾವಿಸಿದ್ದಾಳೆ.
ಕೆಳಗಡೆ ಸಿಲುಕಿದ್ದ ತಾಯಿಯನ್ನು ಉಳಿಸಲು ಬಾಲಕಿ ಆಟೋವನ್ನೇ ಎತ್ತಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಘಟನೆ ಮಂಗಳೂರಿನ ಕಿನ್ನಿಗೋಳಿಯಲ್ಲಿ ನಡೆದಿದೆ.
ಘಟನೆ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಬಾಲಕಿ ಧೈರ್ಯ ಹಾಗೂ ಸಮಯ ಪ್ರಜ್ಞೆಗೆ ನೆಟ್ಟಿಗರಿಂದ ಶ್ಲಾಘನೆ ವ್ಯಕ್ತವಾಗಿದೆ.