ಪಾಕಿಸ್ತಾನ : ಸಾಮಾನ್ಯವಾಗಿ ಸಾರ್ವಜನಿಕ ಸ್ಥಳ, ಕಂಪೆನಿ ಹಾಗೂ ಮನೆಗಳಲ್ಲಿ ಭದ್ರತೆಯ ದೃಷ್ಟಿಯಿಂದ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿರುತ್ತಾರೆ. ಆದರೆ ಇಲ್ಲೊಬ್ಬ ವ್ಯಕ್ತಿ ತನ್ನ ಮಗಳ ತಲೆ ಮೇಲೆ ಕಿರೀಟದಂತೆ ಸಿಸಿಟಿವಿಯನ್ನು ಅಳವಡಿಸಿದ್ದು, ಸದ್ಯ ಘಟನೆಗೆ ಸಂಬಂಧಿಸಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಮಗಳು ಎಲ್ಲೆಲ್ಲಿ ಹೋಗ್ತಾಳೆ? ಏನು ಮಾಡುತ್ತಾಳೆ ಎಂದು ತಿಳಿಯಲು ಈತ ತನ್ನ ಮಗಳ ತಲೆ ಮೇಲೆ ಸಿಸಿಟಿವಿ ಅಳವಡಿಸಿರುವುದಾಗಿ ವರದಿಯಾಗಿದೆ.
ಈ ಘಟನೆ ಪಾಕಿಸ್ತಾನದಲ್ಲಿ ನಡೆದಿದ್ದು, ಸದ್ಯ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ.
ವೈರಲ್ ಆಗಿರುವ ವಿಡಿಯೋದಲ್ಲಿ ತನ್ನ ತಂದೆ 24/7 ತನ್ನ ಮೇಲೆ ನಿಗಾ ವಹಿಸಲು ಸಿಸಿಟಿವಿ ಫಿಕ್ಸ್ ಮಾಡಿದ್ದಾರೆ ಎಂದು ಯುವತಿ ಹೇಳಿದ್ದಾಳೆ. ಇದಲ್ಲದೇ ತಂದೆಯ ಈ ನಿರ್ಧಾರದಿಂದ ನಾನು ಸಂತೋಷವಾಗಿದ್ದೇನೆ ಎಂದು ಹೇಳಿಕೊಂಡಿದ್ದಾಳೆ.



























