ಪುತ್ತೂರು : ಚಲಿಸುತ್ತಿದ್ದ ಲಾರಿಯೊಂದು ಬೆಂಕಿಗಾಹುತಿಯಾದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟಿಯ ಡಬಲ್‌ಟರ್ನ್ ಬಳಿ ನಡೆದಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.
ಮಂಗಳೂರಿನಿಂದ ಬೆಂಗಳೂರು ಕಡೆಗೆ ಸಂಚರಿಸುತ್ತಿದ್ದ ಲಾರಿ ಶಿರಾಡಿ ಘಾಟಿಯ ಡಬಲ್‌ಟರ್ನ್ ಬಳಿ ತಲುಪುತ್ತಿದ್ದಂತೆ ಏಕಾಏಕಿ ಹೊಗೆ ಕಾಣಿಸಿಕೊಂಡಿದೆ. ಕೂಡಲೇ ಚಾಲಕ ಲಾರಿಯನ್ನು ಹೆದ್ದಾರಿ ಬದಿ ನಿಲ್ಲಿಸಿ ಕೆಳಕ್ಕಿಳಿದಿದ್ದಾರೆ. ಬಳಿಕ ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡು ಸುಟ್ಟುಹೋಗಿದೆ ಎಂದು ವರದಿಯಾಗಿದೆ.