ಮಂಗಳೂರು : ಆರ್ಟಿಪಿಷಿಯಲ್ ಇಂಟಿಲಿಜೆನ್ಸ್ ಮೂಲಕ ಹಿಂದೂ ದೇವರ ಪೋಟೋಗಳನ್ನು ಅವಹೇಳನಕಾರಿಯಾಗಿ ಚಿತ್ರಿಸಿ ಅದನ್ನು ಸಾಮಾಜಿಕ ಜಾಲತಾಣ ಫೇಸ್ಬುಕ್ ನಲ್ಲಿ ಅಪ್ಲೋಡ್ ಮಾಡಿದ್ದ Fact Vid ಫೇಸ್ಬುಕ್ ಪೇಜ್ ವಿರುದ್ದ ಹಿಂದೂ ಜನಜಾಗೃತಿ ಸಮಿತಿ ಮತ್ತು ಧರ್ಮಾಭಿಮಾನಿ ನ್ಯಾಯವಾದಿಗಳು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
‘Fact Vid’ ಹೆಸರಿನ ಫೇಸ್ಬುಕ್ ಪೇಜ್ ಒಂದರಲ್ಲಿ ಅನೇಕ ದಿನಗಳಿಂದ AI (Artificial Intelligence) ತಾಂತ್ರಿಕ ಸಹಾಯದಿಂದ ಹಿಂದೂ ದೇವತೆಗಳ ಅಪಮಾನಾತ್ಮಕ ಮತ್ತು ಅಶ್ಲೀಲ ಫೋಟೋಗಳನ್ನು ನಿರಂತರವಾಗಿ ಫೇಸ್ಬುಕ್ ಜಾಲತಾಣದ ಮುಖಾಂತರ ಪ್ರಸಾರ ಮಾಡಲಾಗುತ್ತಿದೆ. ಈ Al ಆಧಾರಿತ ಚಿತ್ರಗಳಿಂದ ಕೋಟ್ಯಂತರ ಹಿಂದೂ ಬಾಂಧವರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ.
ಸಂಬಂಧಿತ ಸೈಬರ್ ಕ್ರೈಮ್ ವಿಭಾಗವು ಇದರ ಬಗ್ಗೆ ಕೂಡಲೇ ಎಚ್ಚೆತ್ತುಕೊಂಡು ಪೇಜ್ ನ ಅಡ್ಮಿನ್ ಗಳನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕೆಂದು ಹಿಂದೂ ಜನಜಾಗೃತಿ ಸಮಿತಿಯ ಆಗ್ರಹಿಸಿದೆ.
ಈ ಕುರಿತು ಮಂಗಳೂರಿನ ಸೈಬರ್ ಕ್ರೈಮ್ ವಿಭಾಗಕ್ಕೆ ಸಮಿತಿಯ ಸಮನ್ವಯಕರು ಮತ್ತು ಧರ್ಮಪ್ರೇಮಿ ನ್ಯಾಯವಾದಿಗಳ ಒಕ್ಕೂಟವು ಸೇರಿ ದೂರು ದಾಖಲಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಉರ್ವ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.