ಬೆಳ್ತಂಗಡಿ : ಕೃಷಿ ತೋಟದಲ್ಲಿ ಸೊಪ್ಪು ಕಡಿಯುತ್ತಿದ್ದ ವೇಳೆ ಕಣಜದ ಹುಳು ದಾಳಿಗೆ ಒಳಗಾದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ.
ಬೆಳ್ತಂಗಡಿ ತಾಲೂಕಿನ ಹೊಸಂಗಡಿ ಗ್ರಾಮದ ಕುಕ್ಕುದಕಟ್ಟೆ ನಿವಾಸಿ ರಾಜೇಶ ಶೆಟ್ಟಿ (44) ಮೃತಪಟ್ಟವರು.
ಸೆ.10ರಂದು ಕಣಜದ ಹುಳುಗಳು ದಾಳಿ ನಡೆಸಿದ್ದು, ಚಿಕಿತ್ಸೆಗಾಗಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.
ಮೃತರ ಸಹೋದರ ಸತೀಶ ಶೆಟ್ಟಿ ನೀಡಿದ ದೂರಿನಂತೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.