ಮಂಗಳೂರು : ಮಹಿಳೆಯೊಬ್ಬರು ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂ.10 ರ ಗುರುವಾರ ನಗರದ ಕಂಕನಾಡಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೃತರನ್ನು ಶ್ರೀಮತಿ ಪುಷ್ಪಲತಾ (64) ಎಂದು ಗುರುತಿಸಲಾಗಿದೆ. ಕುಲಶೇಖರ ಚೌಕಿ ಪ್ಲಾಮ ಗ್ರಾಂಡ್ ಅಪಾರ್ಟ್ ಮೆಂಟ್ ನಲ್ಲಿ ವಾಸವಾಗಿದ್ದ ಇವರು 14 ನೇ ಮಹಡಿಯ ಮನೆಯ ಬಾಲ್ಕನಿಯಿಂದ ಹಾರಿ ಅತ್ಮಹತ್ಯೆ ಮಾಡಿಕೊಂಡಿದ್ದಾರೆ .
ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದ ಇವರು ಈ ಹಿಂದೆಯೂ ಅತ್ಮಹತ್ಯೆ ಯತ್ನ ನಡೆಸಿದ್ದರು. ಕಂಕನಾಡಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.