ಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ, ಪುತ್ತೂರು ಹಾಗೂ ರೋಟರಿ ಕ್ಲಬ್ ಪುತ್ತೂರು ಯುವ ಇದರ ಸಹಭಾಗಿತ್ವದಲ್ಲಿ ಪೋಷಣ್ ಅಭಿಯಾನ ಯೋಜನೆಯಡಿ ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಮೇಲ್ವಿಚಾರಕಿಯರಿಗೆ ಮೊಬೈಲ್ ಫೋನ್ ವಿತರಣಾ ಕಾರ್ಯಕ್ರಮ ಹಾಗೂ ಸಂಕಷ್ಟದಲ್ಲಿರುವ ಮಹಿಳೆ ಮತ್ತು ಮಕ್ಕಳ ನೆರವು-ಅರಿವು ಕಾರ್ಯಕ್ರಮ ಜತೆಗೆ ಕೊರೋನಾ ವಾರಿಯರ್ಸ್ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಗೌರವಾರ್ಪಣೆ ಕಾರ್ಯಕ್ರಮ ನ. 26ರಂದು ಪುತ್ತೂರಿನ ಸೈನಿಕ ಭವನ ರಸ್ತೆಯ ರೋಟರಿ ಮನೀಷಾ ಸಭಾಂಗಣದಲ್ಲಿ ಪೂರ್ವಾಹ್ನ 9.30ಕ್ಕೆ ಸರಿಯಾಗಿ ನಡೆಯಲಿದೆ.