ಬೆಂಗಳೂರು: ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ರವರನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಗುರುವಾರ ಬೆಂಗಳೂರಿನಲ್ಲಿ ಭೇಟಿ ಮಾಡಿ ಬಂಟ್ವಾಳ ಕ್ಷೇತ್ರದಲ್ಲಿ ಕೋವಿಡ್ ನಿರ್ವಹಣೆಯ ಬಗ್ಗೆ ಹಾಗೂ ಆರೋಗ್ಯ ಕೇಂದ್ರಗಳ ವ್ಯವಸ್ಥೆಯ ಬಗ್ಗೆ ಮಾಹಿತಿ ನೀಡಿದರು.
ಬಂಟ್ವಾಳ ತಾಲೂಕು ಸರಕಾರಿ ಆಸ್ಪತ್ರೆಗೆ ಇನ್ನೂ ಹೆಚ್ಚಿನ ಅಗತ್ಯ ಸೌಲಭ್ಯಗಳನ್ನು ಒದಗಿಸುವಂತೆ ಹಾಗೂ ಮಾಣಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮಾದರಿ ಆರೋಗ್ಯ ಕೇಂದ್ರವಾಗಿ ಪರಿವರ್ತಿಸುವಂತೆ ಮನವಿ ಸಲ್ಲಿಸಿದರು.