ಮಂಗಳೂರು : ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಘಟನೆ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಮಾಡೂರು, ತಾರಿಪಡ್ಡು ಬಳಿ ನಡೆದಿದೆ.
ಉಮೇಶ್ ಆಳ್ವ ಅವರ ಕಿರಿಯ ಪುತ್ರ ತಾರಿಪಡ್ಡು ನಿವಾಸಿ ಶ್ರವಣ್ ಆಳ್ವ (25) ಆತ್ಮಹತ್ಯೆಗೆ ಶರಣಾದ ಯುವಕ.
ಮಧ್ಯರಾತ್ರಿ ಶ್ರವಣ್ ಅವರ ಅಣ್ಣ ಕೆಲಸ ಮುಗಿಸಿ ಬಂದಾಗ ಆತ ಬೆಡ್ ರೂಮಿನ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಶ್ರವಣ್ ಎಲೆಕ್ಟ್ರಿಷಿಯನ್ ವೃತ್ತಿ ಮಾಡಿಕೊಂಡಿದ್ದರು. ನಿನ್ನೆ ರಾತ್ರಿ ಸ್ನೇಹಿತರ ಜೊತೆಗಿದ್ದು, ರಾತ್ರಿ ಮನೆಗೆ ಬಂದಿದ್ದ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಉಳ್ಳಾಲ ಪೊಲೀಸರು ಭೇಟಿ ನೀಡಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.