ರಾಮನಗರ : ಕರ್ನಾಟಕದಲ್ಲಿ ನಂದಿನ ಹಾಲಿನ ದರ ಹೆಚ್ಚಳ ಮಾಡುತ್ತೇವೆ. ಹೆಚ್ಚಳ ಮಾಡಿದ ಹಾಲಿನ ದರ ರೈತರಿಗೆ ಹೋಗಬೇಕು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಜಿಲ್ಲೆಯ ಮಾಗಡಿ ಪಟ್ಟಣದಲ್ಲಿ ಅನೇಕ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಉದ್ಘಾಟನೆ ಶಂಕು ಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ನಂದಿನ ಹಾಲಿನ ದರ ಹೆಚ್ಚಳ ಸಂಬಂಧ ಸಭೆ ಕರೆದು ಮಾತುಕತೆ ನಡೆಸಿ ಹಾಲಿನ ದರ ಹೆಚ್ಚಳ ಮಾಡೋಣ ಎಂದು ಹೇಳಿದ್ದಾರೆ. ಆ ಮೂಲಕ ಗ್ರಾಹಕರಿಗೆ ಮತ್ತೊಮ್ಮೆ ಶಾಕ್ ನೀಡಲು ಸರ್ಕಾರ ಮುಂದಾಗುತ್ತಿದೆ.