ನವದೆಹಲಿ : ಕೇಂದ್ರ ಸರ್ಕಾರವು ಅಂಡಮಾನ್ ಮತ್ತು ನಿಕೋಬಾರ್ ದ್ವೀಪದ ರಾಜಧಾನಿ ಪೋರ್ಟ್ ಬ್ಲೇರ್ ಅನ್ನು ಶ್ರೀ ವಿಜಯ ಪುರಂ ಎಂದು ಮರುನಾಮಕರಣ ಮಾಡಿದೆ.
ಈ ಹಿಂದಿನ ಹೆಸರು ವಸಾಹತುಶಾಹಿ ಪರಂಪರೆಯನ್ನು ಹೊಂದಿದ್ದು, ಶ್ರೀ ವಿಜಯ ಪುರಂ ಎಂಬ ಹೊಸ ಹೆಸರು ನಮ್ಮ ಸ್ವಾತಂತ್ರ್ಯ ಹೋರಾಟದಲ್ಲಿ ಸಾಧಿಸಿದ ವಿಜಯವನ್ನು ಸಂಕೇತಿಸುತ್ತದೆ ಎಂದು ಗೃಹ ಸಚಿವ ಅಮಿತ್ ಶಾ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ಪೋರ್ಟ್ ಬ್ಲೇರ್ ಅನ್ನು “ಶ್ರೀ ವಿಜಯ ಪುರಂ” ಎಂದು ಮರುನಾಮಕರಣ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಿಸಿದ್ದಾರೆ. “ದೇಶವನ್ನು ವಸಾಹತುಶಾಹಿ ಮುದ್ರೆಗಳಿಂದ ಮುಕ್ತಗೊಳಿಸಲು” ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.
ಪೋರ್ಟ್ ಬ್ಲೇರ್ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಿಗೆ ಪ್ರವೇಶ ಬಿಂದುವಾಗಿದೆ. ಈಸ್ಟ್ ಇಂಡಿಯಾ ಕಂಪನಿಯ ಬ್ರಿಟಿಷ್ ವಸಾಹತುಶಾಹಿ ನೌಕಾಪಡೆಯ ಅಧಿಕಾರಿ ಕ್ಯಾಪ್ಟನ್ ಆರ್ಚಿಬಾಲ್ಡ್ ಬ್ಲೇರ್ ಅವರ ಹೆಸರನ್ನು ಈ ನಗರಕ್ಕೆ ಇಡಲಾಗಿತ್ತು.