ಬಂಟ್ವಾಳ : ವಿಹಿಂಪ ಮುಂದಾಳು ಶರಣ್ ಪಂಪ್ವೆಲ್ ಗೆ ಬಂಟ್ವಾಳ ಪುರಸಭಾ ಮಾಜಿ ಅಧ್ಯಕ್ಷ ಮಹಮ್ಮದ್ ಶರೀಫ್ ಸವಾಲು ಹಾಕಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿ.ಸಿ.ರೋಡಿನಲ್ಲಿ ನೂರಾರು ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು ಸೇರಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಿದ್ದಾರೆ.
ಶರಣ್ ಪಂಪ್ವೆಲ್ ಕೂಡ ಆಗಮಿಸಿದ್ದು, ಪೊಲೀಸ್ ಸರ್ಪಗಾವಲನ್ನು ಲೆಕ್ಕಿಸದೆ ಕಾರ್ಯಕರ್ತರು ನುಗ್ಗಿದ್ದಾರೆನ್ನಲಾಗಿದೆ. ಘಟನೆಯಿಂದ ಹೆದ್ದಾರಿಯಲ್ಲಿ ಸಂಪೂರ್ಣ ಟ್ರಾಫಿಕ್ ಜಾಮ್ ಉಂಟಾಗಿದೆ.
ರ್ಯಾಲಿ-ಪ್ರತಿ ರ್ಯಾಲಿ ನಡೆಸುವ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ವಾಯ್ಸ್ ಮೆಸೇಜ್ ಮತ್ತು ಚಾಟ್ಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ಪೊಲೀಸರನ್ನು ಈಗಾಗಲೇ ನಿಯೋಜಿಸಲಾಗಿದ್ದು, ಉನ್ನತ ಪೊಲೀಸ್ ಅಧಿಕಾರಿಗಳು ಬಿ.ಸಿ.ರೋಡ್ಗೆ ಆಗಮಿಸಿದ್ದಾರೆ.
ಪ್ರಚೋದನಕಾರಿಯಾಗಿ ಹೇಳಿಕೆ ನೀಡಿರುವ ಬಂಟ್ವಾಳ ಪುರಸಭೆಯ ಮಾಜಿ ಅಧ್ಯಕ್ಷ ಮಹಮ್ಮದ್ ಶರೀಫ್ ಹಾಗೂ ಪುರಸಭಾ ಸದಸ್ಯ ಹಸೈನಾರ್ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಈಗಾಗಲೇ ಪ್ರಕರಣ ದಾಖಲಾಗಿದೆ.